ಬೆಂಗಳೂರು: ಹದಗೆಟ್ಟ ರಸ್ತೆಗಳನ್ನು ದುರಸ್ತಿ ಸೇರದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ವಿರುದ್ಧ ಕಸ್ತೂರಿನಗರ ಕ್ಷೇಮಾಭಿವೃದ್ಧಿ ಸಂಘ, ಕಸ್ತೂರಿನಗರ ಕ್ಲಬ್ ಹಾಗೂ ಕಸ್ತೂರಿನಗರ ಮಹಿಳಾ ಸಮಾಜದ ವತಿಯಿಂದ ಧಿಕ್ಕಾರ ಕೂಗಿ, ರಸ್ತೆ ತಡೆ ನಡೆಸಿದರು.
ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆಗಳನ್ನು ಅಗೆದು ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ರಸ್ತೆ ಸರಿಪಡಿಸುವಂತೆ 2 ವರ್ಷಗಳಿಂದ ಮನವಿ ಮಾಡುತ್ತಿದ್ದರು ಯಾವ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.