ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಸಹ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದ್ದು, ಟೌನ್ ಹಾಲ್ ಸೇರಿದಂತೆ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪೌರತ್ವ ಪ್ರತಿಭಟನೆ ಇಂದೂ ಮುಂದುವರೆಯುವ ಸಾಧ್ಯತೆ... ಬೆಂಗಳೂರಲ್ಲಿ ಬಿಗಿ ಭದ್ರತೆ - ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ
ಬೆಂಗಳೂರಿನ ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಟೌನ್ ಹಾಲ್ ಬಳಿ 3 ಕೆಎಸ್ಆರ್ಪಿ ತಂಡಗಳನ್ನು ನಿಯೋಜಿಸಲಾಗಿದೆ.
ಪೌರತ್ವ ಕಾಯ್ದೆ ಕಿಚ್ಚು
ಇಲ್ಲಿನ ಟೌನ್ ಹಾಲ್ ಬಳಿ ಈಗಾಗಲೇ 3 ಕೆಎಸ್ಆರ್ಪಿ ತುಕಡಿಗಳು ಆಗಮಿಸಿದ್ದು, ನೂರಕ್ಕೂ ಹೆಚ್ಚು ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡನೇ ದಿನವೂ ನಗರದಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಭಟನೆ ತೀವ್ರತೆ ಅರಿತು ಇನ್ನಷ್ಟು ಪೊಲೀಸರನ್ನು ನಿಯೋಜಿಸುವ ಸಾಧ್ಯತೆ ಇದೆ.
ನಿನ್ನೆ (ಡಿ.19) ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಪ್ರತಿಭಟನೆ ನಡೆದಿದ್ದು, 244 ಜನರನ್ನು ವಶಕ್ಕೆ ಪಡೆದು 8 ಎಫ್ಐಆರ್ ದಾಖಲಿಸಲಾಗಿದೆ. ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದಲ್ಲಿಯೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.