ಬೆಂಗಳೂರು:ನಗರದ ಏರ್ಪೋರ್ಟ್ ರಸ್ತೆಯ ಸಾದನಹಳ್ಳಿ ಗೇಟ್ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು.
ಡಿಕೆಶಿ ಬಂಧನಕ್ಕೆ ಖಂಡನೆ: ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಪ್ರತಿಭಟನೆ - ಬೆಂಗಳೂರು
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯಿಂದ ಏರ್ಪೋರ್ಟ್ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ವಿರುದ್ದ ಧ್ವನಿ ಎತ್ತುವವರನ್ನು ಮಟ್ಟಹಾಕಲು ಬಿಜೆಪಿ ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಕಾನೂನಿಗೆ ಎಲ್ಲರೂ ತಲೆಬಾಗಬೇಕು. ಈ ನಿಟ್ಟಿನಲ್ಲಿ ನಮ್ಮ ನಾಯಕ ಇಡಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದರು. ಆದರೆ, ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರ ಪತನನಗೊಳಿಸಲು ಆಪರೇಷನ್ ಕಮಲಕ್ಕೆ ಮುಂದಾದಾಗ ಡಿಕೆಶಿ ಬಂಡೆಯಂತೆ ನಿಂತಿದ್ದರು. ಹೀಗಾಗಿ ಇಡಿಯನ್ನು ಬಳಸಿಕೊಂಡು ಡಿಕೆಶಿಯವರನ್ನು ಬಂಧಿಸಿದೆ ಎಂದು ಪ್ರತಿಭಟನಾಕಾರರು ದೂರಿದರು. ಅಲ್ಲದೆ, ಡಿ ಕೆ ಶಿವಕುಮಾರ್ ಬಿಡುಗಡೆಯಾಗುವವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದ್ರು.