ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಶಾಸಕರ ಕ್ಷೇತ್ರ ಕಡೆಗಣನೆ ಖಂಡಿಸಿ ತೀವ್ರ ಹೋರಾಟಕ್ಕೆ ನಿರ್ಧಾರ - ಕಾಂಗ್ರೆಸ ಶಾಸಕರ ಕ್ಷೇತ್ರ

ಕಾಂಗ್ರೆಸ್ ಶಾಸಕರ ಕ್ಷೇತ್ರ ಕಡೆಗಣನೆ ಖಂಡಿಸಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ಮಾಡಲು ಕಾಂಗ್ರೆಸ್​ ನಿರ್ಧಾರ ತೆಗೆದುಕೊಂಡಿದೆ.

Protest against government, congress Protest against government, Congress MLA constituency, Congress MLA constituency development,  ಸರ್ಕಾರದ ವಿರುದ್ಧ ಪ್ರತಿಭಟನೆ, ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ, ಕಾಂಗ್ರೆಸ ಶಾಸಕರ ಕ್ಷೇತ್ರ, ಕಾಂಗ್ರೆಸ್​ ಎಂಎಲ್​ಎ ಕ್ಷೇತ್ರದ ಅಭಿವೃದ್ಧಿ,
ಕಾಂಗ್ರೆಸ್ ಶಾಸಕರ ಕ್ಷೇತ್ರ ಕಡೆಗಣನೆ ಖಂಡಿಸಿ ತೀವ್ರ ಹೋರಾಟ

By

Published : Feb 15, 2022, 5:27 AM IST

ಬೆಂಗಳೂರು:ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿರುವ ಸರ್ಕಾರದ ಧೋರಣೆ ವಿರುದ್ಧ ತೀವ್ರ ಹೋರಾಟ ನಡೆಸಲು ಶಾಸಕಾಂಗ ಸಭೆ ತೀರ್ಮಾನಿಸಿದೆ.

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುದಾನ ಬಿಡುಗಡೆ ವಿಚಾರ ಕುರಿತು ಸುದೀರ್ಘ ಸಮಾಲೋಚನೆ ನಡೆಯಿತು‌. ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸೇರಿದಂತೆ ಸರ್ಕಾರದ ವಿವಿಧ ಹಗರಣಗಳ ಬಗ್ಗೆಯೂ ಸದನದಲ್ಲಿ ಚಾಟಿ ಬೀಸಲು ನಿರ್ಧರಿಸಲಾಗಿದೆ.

ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಯಾ ಪೈಸೆ ಇಲ್ಲ ಎಂದು ಶಾಸಕರು ಆರೋಪಿಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದಲ್ಲಿ ಸುಳ್ಳುಗಳೇ ತುಂಬಿವೆ. ನಮ್ಮ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನೂ ಅದರಲ್ಲಿ ಸೇರಿಸಲಾಗಿದೆ ಎಂದರು.

ಓದಿ:ಹಿರಿಯ ಪೋಷಕ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಿಲ್ಲ. ಕೇಳಿದರೆ ಕೋವಿಡ್ ನೆಪ ಹೇಳಲಾಗುತ್ತಿದೆ. ಆರ್ಥಿಕವಾಗಿ ರಾಜ್ಯ ದಿವಾಳಿ ಆಗಿದೆ. ಹಣಕಾಸು ಪರಿಸ್ಥಿತಿ ಕೆಟ್ಟದಾಗಿದೆ. ರಾಜ್ಯದಿಂದ ಪ್ರತಿ ವರ್ಷ ಮೂರು ಲಕ್ಷ ಕೋಟಿ ತೆರಿಗೆ ಸಂಗ್ರವಾಗುತ್ತದೆ. ಆದರೆ ಕೇಂದ್ರ ಸರ್ಕಾರ ನಮಗೆ ನೀಡುವ ಪರಿಹಾರ 50-60 ಸಾವಿರ ಕೋಟಿ ಮಾತ್ರ. ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಮನೆಯನ್ನು ಸರ್ಕಾರ ಹೊಸದಾಗಿ ಕೊಟ್ಟಿಲ್ಲ. ಪತ್ರಿಕೆಗಳಿಗೆ ನಿತ್ಯ ಜಾಹಿರಾತು‌ ನೀಡುತ್ತಿರುವ ಸರ್ಕಾರ ಅದರಲ್ಲಿಯೂ ಸುಳ್ಳುಗಳನ್ನು ಹೇಳಿದೆ ಎಂದರು.

ನೀರಾವರಿಗೆ ಒಂದು ಲಕ್ಷ ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದ ಸರ್ಕಾರ ಅದರಲ್ಲಿಯೂ ವಿಫಲವಾಗಿದೆ. ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿರುವುದನ್ನು ಹೊರತುಪಡಿಸಿದರೆ ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗೂ ಹಣ ಕೊಟ್ಟಿಲ್ಲ. ಗುತ್ತಿದಾರರ ಸಂಘ ಸರ್ಕಾರದ ವಿರುದ್ಧ ಮಾಡಿರುವ ಶೇ.40 ಪರ್ಸೆಂಟ್ ಕಮಿಷನ್ ಆರೋಪ, ರಾಷ್ಟ್ರೀಯ ಶಿಕ್ಷಣ ನೀತಿ‌ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ರಾಮಲಿಂಗ ರೆಡ್ಡಿ, ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಖಾದರ್, ಹಿರಿಯ ಮುಖಂಡರಾದ ದೇಶಪಾಂಡೆ, ಎಚ್.ಕೆ. ಪಾಟೀಲ್, ಎಐಸಿಸಿಯ ಚುನಾವಣಾ ವೀಕ್ಷಕರಾದ ಸುದರ್ಶನ ನಾಚಿಯಪ್ಪನ್, ಅಬ್ರಹಾಂ ಅವರು ಸಭೆಯಲ್ಲಿ ಹಾಜರಿದ್ದರು.

ABOUT THE AUTHOR

...view details