ಬೆಂಗಳೂರು: ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು, ನಿಷೇಧಾಜ್ಞೆ ಜಾರಿ ನಡುವೆಯೂ ನಗರದ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ - 144 Section enforcement at bangalore'
ಎಡ ಪಕ್ಷಗಳ ಸಂಘಟನೆಗಳಾದ ಸಿಪಿಐ, ಸಿಪಿಐಎಂ, ಸಿಪಿಐಎಂಎಲ್, ಎಐಎಫ್ಬಿ,ಸಂಘಟನೆಗಳ ಸದಸ್ಯರು ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ
ಎಡ ಪಕ್ಷಗಳ ಸಂಘಟನೆಗಳಾದ ಸಿಪಿಐ, ಸಿಪಿಐಎಂ, ಸಿಪಿಐಎಂಎಲ್, ಎಐಎಫ್ಬಿ,ಸಂಘಟನೆಗಳ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರುತ್ತಿದ್ದಂತೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಪೊಲೀಸರು ಎಚ್ಚರಿಕೆ ನೀಡಿದರಾದರೂ ಹೆದರದ ಪ್ರತಿಭಟನಾಕಾರರು, ಹೋರಾಟ ಮುಂದುವರೆಸಿದಾಗ, ಹಲವರನ್ನು ವಶಕ್ಕೆ ಪಡೆಯಲಾಯಿತು.