ಬೆಂಗಳೂರು: ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾಶಂಕರ್ ಅವರು ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾದ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದನ್ನು ವಿರೋಧಿಸಿ ಜಯನಗರದಲ್ಲಿ ಬಹುಜನ ಮಹಾಸಭಾ ವತಿಯಿಂದ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ಗೆ ಅವಮಾನಿಸಿದ ಆರೋಪ: ಬಹುಜನ ಮಹಾಸಭಾದಿಂದ ಪ್ರತಿಭಟನೆ
ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾಶಂಕರ್ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅಮಾನಿಸಿದ್ದಾರೆ ಎಂದು ಆರೋಪಿಸಿ ಜಯನಗರದಲ್ಲಿ ಬಹುಜನ ಸಮಾಜವಾದಿ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು.
ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿದಲ್ಲ ಹೇಳಿಕೆ ವಿರುದ್ಧ ಪ್ರತಿಭಟನೆ
ಬಹುಜನ ಮಹಾಸಭಾ ಸಂಘಟನೆಯ ರಾಜ್ಯಾಧ್ಯಕ್ಷ ಆರ್ ಶೇಖರ್ ಮಾತನಾಡಿ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಅವರು ಎಲ್ಲಾ ಶಾಲೆಗಳಿಗೆ ನೀಡಿರುವ ಮಾರ್ಗಸೂಚಿಯಲ್ಲಿ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ವಿಚಾರ ಉಲ್ಲೇಖಿಸಿದ್ದಾರೆ ಎಂದು ಕಿಡಿಕಾರಿದರು.ಅಲ್ಲದೆ ಅಂಬೇಡ್ಕರ್ ವಿರೋಧಿ ನಿಲುವು ತಳಿದಿರುವ ಉಮಾಶಂಕರ್ ಅವರನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಬೇಕು ಎನ್ನುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಇದೇ ವೇಳೆ ಪ್ರತಿಭಟನಾನಿರತರು ಮಾಡಿದರು.