ಕರ್ನಾಟಕ

karnataka

ETV Bharat / state

ಗ್ರಾಮ ಪಂಚಾಯಿತಿ ನೌಕರರಿಂದ ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಕರ್ನಾಟಕ ರಾಜ್ಯ ಗ್ರಾಮಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ - ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನೌಕರರ ಅನಿರ್ದಿಷ್ಟಾವಧಿ ಧರಣಿ

Etv Bharatprotest at Freedom Park
ಗ್ರಾಮ ಪಂಚಾಯಿತಿ ನೌಕರರಿಂದ ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ

By

Published : Feb 6, 2023, 7:01 PM IST

ಬೆಂಗಳೂರು: ಗ್ರಾಮ ಪಂಚಾಯಿತಿಯ ಎಲ್ಲ ನೌಕರರನ್ನು ಸಿ ಮತ್ತು ಡಿ ಹುದ್ದೆಗಳಿಗೆ ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನೆಡೆಸಿತು.

ಸೋಮವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರಾರಂಭವಾದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಸಂಧರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಳ ರಾಜ್ಯದಲ್ಲಿ ಪ್ರಥಮ ಬಾರಿಗೆ ಪಂಚಾಯತ್‌ ನೌಕರರೇ ಸೇರಿ ಕಳೆದ ವರ್ಷ ಡಿಸೆಂಬರ್ 19 ರಂದು ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನೆಡೆಸಿದರು. ಗ್ರಾಮೀಣ ಭಾಗದಲ್ಲಿನ ಕಾರ್ಯಗಳನ್ನು ನಿಲ್ಲಿಸಿ, ಮೂಲ ಬೇಡಿಕೆಗಳನ್ನು ರಾಜ್ಯ ಮಟ್ಟದ ಬೃಹತ್ ಹೋರಾಟವನ್ನು ನಡೆಸಿದ್ದೆವು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಮನವಿಯಲ್ಲಿ ನೀಡಲಾದ ಬೇಡಿಕೆಗಳನ್ನು ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು ಎಂದರು.

ಆಶ್ವಾಸನೆಯನನು ನೀಡಿ ಹೋರಾಟ ನಡೆಸಿ 1 ತಿಂಗಳು ಕಳೆದರೂ ಸರ್ಕಾರ ಯಾವುದೇ ರೀತಿಯಲ್ಲೂ ಸಕಾರಾತ್ಮಕ ಸ್ಪಂದನೆ ನೀಡಿಲ್ಲ. ಇದು ಪಂಚಾಯತ್ ನೌಕರರ ಅಸಮಾಧಾನಕ್ಕೆ ಗುರಿಯಾಗಿದೆ. ಈವರೆಗೂ ಸಂಘಟನೆಯೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸದೇ ಇರುವ ಕಾರಣ ರಾಜ್ಯದ ಸಮಸ್ತ ಪಂಚಾಯತ್ ನೌಕರರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಪಂಚಾಯತ್‌ನಂತೆ ಸೇವಾ ನಿಯಮಾವಳಿ ತನ್ನಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಇಲಾಖೆಯ ಅಭಿವೃದ್ಧಿಗೆ ಕಳೆದ ಮೂರು ದಶಕಗಳಿಂದ ಹಗಲಿರುಳು ದುಡಿಯುತ್ತಿದ್ದಾರೆ. ಬಡ ಗ್ರಾಮ ಪಂಚಾಯತ್ ನೌಕರರಾದ ಬಿಲ್ ಕಲೆಕ್ಟರ್, ಕ್ಲರ್ಕ್ ಕಮ್ ಡಿಇಒ, ಡಾಟ ಎಂಟ್ರಿ ಆಪರೇಟರ್‌ಗಳಿಗೆ ಸಿ ದರ್ಜೆ ಸ್ಥಾನಮಾನ ನೀಡಬೇಕು ಮತ್ತು ಅಟೆಂಡರ್, ಕ್ಲೀನರ್, ವಾಟರ್ ಹಾಗೂ ಪಂಪು ಚಾಲಕ ಮುಂತಾದ ವೃಂದದವರಿಗೆ ಡಿ ದರ್ಜೆ ಸ್ಥಾನಮಾನ ನೀಡಬೇಕು. ನಗರ ಮತ್ತು ಪಟ್ಟಣ ಪಂಚಾಯತ್‌ನಂತೆ ಸೇವಾನಿಯಮಾವಳಿ ಮಾಡಬೇಕು. ನೌಕರರಿಗೆ ಕನಿಷ್ಠ ವೇತನ ಬದಲು ವೇತನ ಶ್ರೇಣಿ ನಿಗದಿಪಡಿಸಬೇಕು ಮತ್ತು ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ನಿವೃತ್ತಿ ಉಪಧನ ಮಂಜೂರಿಗೆ ಒತ್ತಾಯ:ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಇತರ ಸಮಸ್ಯೆಗಳನ್ನು ಬಗೆಹರಿಸಬೇಕು ಜಿಲ್ಲಾಪಂಚಾಯತ್ ಅನುಮೋದನೆಯಾಗದೇ ನಿವೃತ್ತಿಯಾದ ಎಲ್ಲಾ ಗ್ರಾಮಪಂಚಾಯತ್ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಹೋರಾಟದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕುಲಾಲ್, ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಕೆ ಪ್ರಶಾಂತ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಆಶ್ರಫ್, ಉತ್ತರ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಗಂಗಾಧ‌ ನಾಯ್ಕ, ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಎ ಸಿ ಜಯಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ದಯಾನಂದ, ರಾಮನಗರ ಜಿಲ್ಲಾ ಉಸ್ತುವಾರಿ ಕೆ ದಿನೇಶ್, ಚಿಕ್ಕಮಗಳೂರು ಉಸ್ತುವಾರಿ ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಜನಾರ್ದನ ರೆಡ್ಡಿ ಬಿಜೆಪಿಯಲ್ಲಿ ಇಲ್ಲ, ಹೀಗಾಗಿ ಅಧಿಕಾರಕ್ಕೆ ಬರುವುದಿಲ್ಲ: ಎಸ್ ಆರ್ ಹಿರೇಮಠ

ABOUT THE AUTHOR

...view details