ಬೆಂಗಳೂರು:ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ತೀರ್ಮಾನಿಸಿದೆ.
ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ: ಇಂದು ಕಾಂಗ್ರೆಸ್ನಿಂದ ಸಾಂಕೇತಿಕ ಪ್ರತಿಭಟನೆ - ಎಪಿಎಂಸಿ ಕಾಯ್ದೆ
ಇಂದು 11 ಗಂಟೆಗೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿಲಿದೆ.
ವಿಧಾನಸೌಧ, ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಇದಾದ ಬಳಿಕ ಮುಂದಿನ ದಿನಗಳಲ್ಲಿ ರಾಜ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ನಾಯಕರ ಜೊತೆ ಚರ್ಚೆ ಮಾಡಿ ರಾಜ್ಯಪಾಲರು, ಚುನಾವಣಾ ಆಯುಕ್ತರ ಭೇಟಿಗೆ ದಿನಾಂಕ ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ತಪ್ಪು ನಿರ್ಧಾರಗಳ ಬಗ್ಗೆಯೂ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.