ಕರ್ನಾಟಕ

karnataka

ETV Bharat / state

ಗಲಭೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ - ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರಿನನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.

Protest by DSS condemning Bengaluru riots
ಗಲಭೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

By

Published : Aug 14, 2020, 4:15 PM IST

ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ಹಾಗೂ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲಿನ ದಾಳಿ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಸದಸ್ಯರು, ಶಾಸಕರ ಮನೆಗೆ ಬೆಂಕಿ ಹಾಕಿದ್ದು ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ರಾಷ್ಟ್ರವಿರೋಧಿ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಲಭೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಈ ವೇಳೆ ಸಮಿತಿ ಮುಖಂಡ ರಘು ಮಾತನಾಡಿ, ದಲಿತರ ಮನೆ ಸುಟ್ಟು ಹೋಗಿದೆ. ಆದ್ರೆ ನಮ್ಮ ನಾಯಕರು ಮತ ಬ್ಯಾಂಕ್​ ರಾಜಕಾರಣದಲ್ಲಿ ತೊಡಗಿದ್ದಾರೆ. ದಲಿತ ನಾಯಕನ ಪರ ಒಬ್ಬರೂ ನಿಂತಿಲ್ಲ. ಕಿಡಿಗೇಡಿಗಳು ಇಡೀ ವ್ಯವಸ್ಥೆಯ ಮೇಲೆ ದಾಳಿ ಮಾಡಿದ್ದಾರೆ. ಸರ್ಕಾರಕ್ಕೆ ಜನಪರ ಕಾಳಜಿ ಇದ್ದರೆ, ಯಾವ ಒತ್ತಡಕ್ಕೂ ಮಣಿಯದೆ ಗಲಭೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ABOUT THE AUTHOR

...view details