ಬೆಂಗಳೂರು : ಖಾಯಂ ಉದ್ಯೋಗ, ಕನಿಷ್ಠ ವೇತನ ಹಾಗೂ ನಿವೃತ್ತಿ ವೇತನಕ್ಕಾಗಿ ಆಗ್ರಹಿಸಿ ಬಿಸಿಯೂಟ ನೌಕರರು ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಶಿಕ್ಷಣ ಸಚಿವರ ನಿವಾಸದ ಮುಂದೆ ಬಿಸಿಯೂಟ ನೌಕರರ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು - ಶಿಕ್ಷಣ ಸಚಿವರ ಮನೆ ಮುಂದೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕಕರು ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ರಾಜಾಜಿನಗರದಲ್ಲಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ಏಪ್ರಿಲ್ ತಿಂಗಳಿನಿಂದ ಬಾಕಿಯಿರುವ ವೇತನ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು, ಸಚಿವರ ಮನೆ ಬಳಿ ಕುಳಿತು ಪ್ರತಿಭಟನೆ ಮಾಡುವುದಕ್ಕೆ ಅವಕಾಶ ಇಲ್ಲ. ಪ್ರತಿಭಟನೆ ಮಾಡುವುದಾದರೆ ಫ್ರೀಡಂ ಪಾರ್ಕ್ ಇದೆ ಎಂದು ಹೇಳಿದರು. ಈ ವೇಳೆ ನೌಕರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.
TAGGED:
ಬಿಸಿಯೂಟ ನೌಕರರಿಂದ ಪ್ರತಿಭಟನೆ