ಕರ್ನಾಟಕ

karnataka

ETV Bharat / state

ನಾಳೆಯಿಂದ ವಿಧಾನಸಭಾ ಅಧಿವೇಶನ.. ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ತಂತ್ರ..

ನಾಳೆಯಿಂದ‌ ಮೂರು ದಿನಗಳ‌ ಕಾಲ ವಿಧಾನಸಭಾ ಅಧಿವೇಶನ ನಡೆಯಲಿದ್ದು, ನೆರೆ ಪರಿಹಾರ ವಿಳಂಬ ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಆಡಳಿತ ಪಕ್ಷದ ವಿರುದ್ಧ ಚಾಟಿ ಬೀಸಲು ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

By

Published : Oct 9, 2019, 9:13 PM IST

ವಿಧಾನಸಭಾ ಅಧಿವೇಶನ; ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ

ಬೆಂಗಳೂರು:ನಾಳೆಯಿಂದ‌ ಮೂರು ದಿನಗಳ‌ ಕಾಲ ವಿಧಾನಸಭಾ ಅಧಿವೇಶನ ನಡೆಯಲಿದ್ದು, ನೆರೆ ಪರಿಹಾರ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಡಳಿತ ಪಕ್ಷದ ವಿರುದ್ಧ ಚಾಟಿ ಬೀಸಲು ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಸಜ್ಜಾಗಿವೆ.

ಕೇಂದ್ರ ‌ಸರ್ಕಾರದಿಂದ ನೆರೆ ಪರಿಹಾರ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದು,ಜೆಡಿಎಸ್ ಕಚೇರಿಯಿಂದ ಫ್ರೀಡಂಪಾರ್ಕ್‌ವರೆಗೂ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ 5 ಸಾವಿರ ಜನರು ಭಾಗವಹಿಸುವ ಸಾಧ್ಯತೆಯಿದೆ.

ವಿಧಾನಸಭಾ ಅಧಿವೇಶನ.. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ

ಇನ್ನೊಂದೆಡೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ‌ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ‌ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಇದರಲ್ಲಿ ಸಾವಿರಾರು ರೈತರು ಸರ್ಕಾರದ ವಿರುದ್ಧ ಘೋಷಣೆ‌ ಕೂಗಲಿದ್ದಾರೆ.

ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ 2 ಕಿ.ಮೀ‌ ಸುತ್ತಮುತ್ತಲೂ ಬೆಂಗಳೂರು ಪೊಲೀಸರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದು, ಈಮಧ್ಯೆ ಪ್ರತಿಭಟನಾಕಾರರು ಆದೇಶ ಉಲ್ಲಂಘಿಸುವ ಸಾಧ್ಯತೆ ಹಿನ್ನೆಲೆ ಹಾಗೂ ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಫ್ರೀಡಂಪಾರ್ಕ್ ಬಳಿ ಪ್ರತಿಭಟನಾಕರರನ್ನು ಹಿಮ್ಮೆಟ್ಟಿಸಲು ಪೊಲೀಸರು ಸರ್ಪಗಾವಲು ಹಾಕಲು ಪ್ಲಾನ್ ಮಾಡಿಕೊಂಡಿದ್ದಾರೆ.

ಏಕಾಏಕಿ ರಸ್ತೆಗೆ ಸಾವಿರಾರು ಜನರು ಪ್ರತಿಭಟನೆ ನಡೆಸುವುದರಿಂದ ನಗರದ ಹೃದಯಭಾಗವಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಗಾಂಧಿನಗರ, ಫ್ರೀಡಂಪಾರ್ಕ್,ಕೆಜಿ ರಸ್ತೆ, ಕಾರ್ಪೊರೇಷನ್ ಸುತ್ತಮುತ್ತ ಟ್ರಾಫಿಕ್ ಬಿಸಿ ಇರಲಿದ್ದು, ಆದಷ್ಟು ವಾಹನ ಸವಾರರು ಈ ಮಾರ್ಗಗಳನ್ನು ಬಳಸದಂತೆ ಟ್ರಾಫಿಕ್ ಪೊಲೀಸರು ಮನವಿ‌ ಮಾಡಿಕೊಂಡಿದ್ದಾರೆ.

ABOUT THE AUTHOR

...view details