ಬೆಂಗಳೂರು:ರಾಜ್ಯ ಬಂದ್ ಬದಲಿಗೆ ಸಾಂಕೇತಿಕ ಪ್ರತಿಭಟನೆ ಕೈಗೊಂಡಿರುವ ಕನ್ನಡಪರ ಸಂಘಟನೆಗಳು ಎಂಇಎಸ್ ನಿಷೇಧಕ್ಕಾಗಿ ಆಗ್ರಹಿಸಿದ್ದಾರೆ. ನಿನ್ನೆ ಸಿಎಂ ಮನವಿಯ ಮೇರೆಗೆ ಬಂದ್ ನಿರ್ಧಾರವನ್ನು ವಾಟಾಳ್ ಸೇರಿದಂತೆ ಕನ್ನಡಪರ ಸಂಘಟನೆಗಳು ಕೈಬಿಟ್ಟಿದ್ದವು. ಈ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕ ಪ್ರತಿಭಟನೆ ಕೈಗೊಂಡಿದ್ದಾರೆ.
ವಾಟಾಳ್ ನಾಗರಾಜ್, ಸಾರಾ ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮೆರವಣಿಗೆ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಇನ್ನು, ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಸೇರುವ ಸಾಧ್ಯತೆಯಿದ್ದು, ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಭದ್ರತೆಯ ಹೊಣೆ ಹೊತ್ತಿದ್ದಾರೆ