ಕರ್ನಾಟಕ

karnataka

ETV Bharat / state

ಕೆ.ಆರ್.ಪುರ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಲವು ಸಂಘಟನೆಗಳಿಂದ ಪ್ರತಿಭಟನೆ - ಹಲವು ಸಂಘಟನೆಗಳಿಂದ ಪ್ರತಿಭಟನೆ

ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೆ ಒಕ್ಕೂಟದ ಅಧ್ಯಕ್ಷ ಎಲ್ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಗೆ ಕೈಜೋಡಿಸಿದರು.

ಪ್ರತಿಭಟನೆ
ಪ್ರತಿಭಟನೆ

By

Published : Sep 28, 2020, 10:51 PM IST

ಕೆ.ಆರ್.ಪುರ:ಕರ್ನಾಟಕ ಬಂದ್ ಗೆ ಕೆ.ಆರ್.ಪುರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭೂಸುಧಾರಣಾ ಕಾಯ್ದೆಯ ವಿರುದ್ದ ಪ್ರತಿಭಟನೆ ನಡೆಸಿದರು.

ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೆ ಒಕ್ಕೂಟದ ಅಧ್ಯಕ್ಷ ಎಲ್ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಗೆ ಕೈಜೋಡಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಲವು ಸಂಘಟನೆಗಳಿಂದ ಪ್ರತಿಭಟನೆ
ಪ್ರತಿಭಟನೆಯ ನೇತ್ರತ್ವ ವಹಿಸಿ ಮಾತನಾಡಿದ ಕರುನಾಡ ರೈತ ಸಂಘದ ರಾಜ್ಯಾದ್ಯಕ್ಷ ಡಾ.ಮಹಬೂಬ್ ಪಾಷಾ, ಸರ್ಕಾರದ ಈ ಹೊಸ ಕಾಯ್ದೆಯಿಂದ ಶ್ರೀಮಂತರಿಗೆ ಕಾರ್ಪೊರೇಟ್ ಸಂಸ್ಥೆಗಳಿಗೆ ಕೈಗಾರಿಕಾ ಉದ್ಯಮಿಗಳಿಗೆ ಬಂಡವಾಳ ಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತಿದೆ ಇದು ರೈತರ ಮರಣ ಶಾಸನ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತರು ತಾವು ಬೆಳೆದ ಬೆಳೆಗಳನ್ನು ನೇರವಾಗಿ ಸಂತೆಗಳಲ್ಲಿ ಮಾರಾಟ ಮಾಡುತ್ತಿದ್ದರು, ಇದರಿಂದ ಜನರಿಗೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುತಿತ್ತು, ಕಾಯ್ದೆಯಿಂದ ಭವಿಷ್ಯದಲ್ಲಿ ಕಾರ್ಪೋರೇಟ್ ಸಂಸ್ಥೆಗಳನ್ನು ಅವಲಂಭಿಸಬೇಕಾಗುತ್ತದೆ ಎಂದು ಹೇಳಿದರು.

ABOUT THE AUTHOR

...view details