ಕರ್ನಾಟಕ

karnataka

ETV Bharat / state

ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​: ಎಸ್ಎಫ್ಐ ಸಂಘಟನೆಯಿಂದ ಪ್ರತಿಭಟನೆ

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ಬಳಸಿ ಜಲ ಫಿರಂಗಿ, ಲಾಠಿ ಚಾರ್ಜ್ ದಾಳಿಯನ್ನು ನಡೆಸಿದೆ ಎಂದು ಆರೋಪಿಸಿ ಎಸ್ಎಫ್ಐ ಸಂಘಟನೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ

By

Published : Nov 21, 2019, 7:27 PM IST

ಬೆಂಗಳೂರು:ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ಬಳಸಿ ಜಲ ಫಿರಂಗಿ, ಲಾಠಿ ಚಾರ್ಜ್ ದಾಳಿಯನ್ನು ನಡೆಸಿದೆ ಎಂದು ಆರೋಪಿಸಿ ಎಸ್ಎಫ್ಐ ಸಂಘಟನೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ಸಂಘಟನೆ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿತುತು.

ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುವ ವಿಶ್ವವಿದ್ಯಾಲಯದ ಉಪಕುಲಪತಿಗಳು ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸದೆ, ಪೊಲೀಸ್ ಬಲವನ್ನು ಬಳಸಿ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿ, ಎಫ್ಐಆರ್ ದಾಖಲಿಸಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದ ಕೇಂದ್ರ ಸರ್ಕಾರದ ನಡೆಯನ್ನು ಎಸ್ಎಫ್ಐ ಸಂಘಟನೆ ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಜೆ‌.ಎನ್‌.ಯುನಲ್ಲಿ ಹೆಚ್ಚಿಸಿರುವ ಶುಲ್ಕವನ್ನು ವಾಪಸ್​ ಪಡೆದು ಮೊದಲಿದ್ದ ಶುಲ್ಕವನ್ನೆ ಮುಂದುವರೆಸಬೇಕು. ಬಂಧಿಸಿರುವ ವಿದಾರ್ಥಿಗಳನ್ನು ಬಿಡುಗಡೆ ಮಾಡಿ, ಅವರ ಮೇಲೆ ದಾಖಲಿಸಿರುವ ಎಫ್.ಐ.ಆರ್ ರದ್ದುಗೊಳಿಸಬೇಕು ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ಧಮನವನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ರಾಷ್ಟ್ರವ್ಯಾಪಿ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನೆ ಮೂಲಕ ಎಸ್ಎಫ್ಐ ಸಂಘಟನೆಯವರು ಆಗ್ರಹಿಸಿದರು.

ABOUT THE AUTHOR

...view details