ಕರ್ನಾಟಕ

karnataka

By

Published : Nov 14, 2019, 8:42 AM IST

ETV Bharat / state

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಧರಣಿ: ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ, ಭರವಸೆ

ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಕಳೆದ ಹತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಇದುವರೆಗೆ ಸರ್ಕಾರದ ಯಾವುದೇ ಪ್ರತಿನಿಧಿಗಳು ಆಗಮಿಸಿ ಸ್ಪಂದಿಸಿರಲಿಲ್ಲ. ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಷ್ಕರ ಕೈ ಬಿಡುವಂತೆ ಕನ್ನಡ ಪರ ಸಂಘಟನೆಗಳ ಮನವೊಲಿಸುವ ಪ್ರಯತ್ನ ಮಾಡಿದರು.

ತಿಭಟನಾ ಸ್ಥಳಕ್ಕೆ ಸಚಿವ ರಮೇಶ್ ಕುಮಾರ್ ಭೇಟಿ

ಬೆಂಗಳೂರು: ಐಟಿ, ರೈಲ್ವೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಬಗ್ಗೆ ಶಿಫಾರಸ್ಸುಗಳನ್ನು ಹೊಂದಿರುವ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ.

ನಗರದ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಕಳೆದ ಹತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಇದುವರೆಗೆ ಸರ್ಕಾರದ ಯಾವುದೇ ಪ್ರತಿನಿಧಿಗಳು ಆಗಮಿಸಿ ಸ್ಪಂದಿಸಿರಲಿಲ್ಲ. ಸದ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮುಷ್ಕರ ಕೈಬಿಡುವಂತೆ ಕನ್ನಡ ಪರ ಸಂಘಟನೆಗಳ ಮನವೊಲಿಸುವ ಪ್ರಯತ್ನ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಸಚಿವ ರಮೇಶ್ ಕುಮಾರ್ ಭೇಟಿ

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಖಂಡಿತವಾಗಿ ಚರ್ಚೆ ನಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಪ್ರತಿಭಟನೆಗೆ ಕೈಜೋಡಿಸಿದರು.

For All Latest Updates

TAGGED:

ABOUT THE AUTHOR

...view details