ಶಿವಮೊಗ್ಗ: ಉದ್ಯೋಗದಿಂದ ತೆಗೆದು ಹಾಕಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾಗರದ ಕೆಳದಿ ಗ್ರಾಮದಲ್ಲಿ ನಡೆದಿದೆ. ಕೆಳದಿ ಗ್ರಾಮದ ಕೆನರಾ ಬ್ಯಾಂಕ್ಗೆ ಕಳೆದ ಹತ್ತಾರು ವರ್ಷಗಳಿಂದ ಬ್ಯಾಂಕ್ ಮಿತ್ರ ಎಂಬ ಹುದ್ದೆಯನ್ನು ಸೃಷ್ಟಿಸಲಾಗಿತ್ತು.
ಇವರು ಬ್ಯಾಂಕ್ ಹಾಗೂ ಗ್ರಾಹಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬ್ಯಾಂಕ್ಗಳಲ್ಲಿ ಹೊಸ ಗ್ರಾಹಕರನ್ನು ಹುಡುಕಿ ಖಾತೆ ತೆರೆಯುವುದು ಸೇರಿದಂತೆ ಬ್ಯಾಂಕ್ ವ್ಯವಹಾರದ ಲಾಭಗಳನ್ನು ಜನ ಸಾಮಾನ್ಯರಿಗೆ ತಿಳಿಸಿ, ಗ್ರಾಹಕರನ್ನಾಗಿ ಮಾಡುವ ಉದ್ಯೋಗ ಮಾಡುತ್ತಿದ್ದರು.
ಹೀಗೆ ಕೆಲಸ ಮಾಡುತ್ತಿದ್ದವರನ್ನು ಬ್ಯಾಂಕ್ ಸಿಬ್ಬಂದಿ ಏಕಾಏಕಿ ಕೆಲಸದಿಂದ ತೆಗೆದು ಹಾಕಿದನ್ನು ವಿರೋಧಿಸಿ ಬ್ಯಾಂಕ್ ಮಿತ್ರ ನೌಕರರು ನಿನ್ನೆಯಿಂದ ಬ್ಯಾಂಕ್ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ಇಂದು ಧರಣಿ 2ನೇ ದಿನಕ್ಕೆ ಕಾಲಿಟ್ಟಿತ್ತು.