ಬೆಂಗಳೂರು : ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದ ಬಳಿ ಇಂದು ಜನರು ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಆಕಾಂಕ್ಷಿ ನಾಗಲಕ್ಷ್ಮೀ ಚೌಧರಿ, ಪಿ.ಎನ್.ಕೃಷ್ಣ ಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ದಾಸರಹಳ್ಳಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬೆಂಬಲಿಗರು ಜಮಾಯಿಸಿದ್ದು, ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ದಾಸರಹಳ್ಳಿ ಕ್ಷೇತ್ರದಲ್ಲಿ ಧನಂಜಯ್ಗೆ ಟಿಕೆಟ್ ನೀಡುವುದು ಬೇಡ ಎಂದು ಒತ್ತಾಯಿಸಿದರು. ಅಲ್ಲದೇ, ಯೋಗೇಶ್ಗೆ ಟಿಕೆಟ್ ನೀಡುವಂತೆ ಮೊಳಕಾಲ್ಮೂರು ಕ್ಷೇತ್ರದವರು ಅರೆನಗ್ನ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಟಿಕೆಟ್ ಹಂಚಿಕೆ ಅಸಮಾಧಾನ: ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಟಿಕೆಟ್ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಜನರು ಪ್ರತಿಭಟನೆ ನಡೆಸಿದ್ದಾರೆ.
ಟಿಕೆಟ್ ಹಂಚಿಕೆ ವಿಚಾರ : ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ
Last Updated : Mar 30, 2023, 2:17 PM IST