ಬೆಂಗಳೂರು:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಹೊರವಲಯದಲ್ಲಿ ಪ್ರತಿಭಟನೆ ನಡೆಸಿದರು.
ಡಿಕೆಶಿ ಬಂಧನಕ್ಕೆ ವಿರೋಧ: ಬೆಂಗಳೂರು ಹೊರವಲಯದಲ್ಲಿ ಮುಂದುವರಿದ ಪ್ರತಿಭಟನೆ - kempegowda Airport
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ವೈಟ್ಫೀಲ್ಡ್ನ ವರ್ತೂರು ಕೋಡಿ ಹಾಗೂ ಓಲ್ಡ್ ಮದ್ರಾಸ್ ರಸ್ತೆಯ ಬೂದಿಗೆರೆ ಕ್ರಾಸ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಓಲ್ಡ್ ಮದ್ರಾಸ್ ರಸ್ತೆಯ ಬೂದಿಗೆರೆ ಕ್ರಾಸ್ನಲ್ಲಿ ಮಂಡೂರು ಜಿಲ್ಲಾ ಪಂಚಾಯತಿ ಸದಸ್ಯ ಕೆಂಪರಾಜು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಟೈಯರ್ಗಳಿಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಏರ್ಪೋರ್ಟ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಕೂಡ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.
ಇನ್ನೊಂದೆಡೆ ವೈಟ್ಫೀಲ್ಡ್ನ ವರ್ತೂರು ಕೋಡಿಯಲ್ಲಿ ಹಗದೂರು ವಾರ್ಡ್ ಪಾಲಿಕೆ ಸದಸ್ಯ ಉದಯ್ ಕುಮಾರ್, ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದರು.