ಬೆಂಗಳೂರು:ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಮಾಡಿದಂತಹ ಒಂದೇ ಒಂದು ಟ್ವೀಟ್ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸಂಸದ ತೇಜಸ್ವಿ ವಿರುದ್ದ ಭುಗಿಲೆದ್ದ ಆಕ್ರೋಶ.. ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ!
ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಮಾಡಿದಂತಹ ಒಂದೇ ಒಂದು ಟ್ವೀಟ್ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಮೈಸೂರು ಬ್ಯಾಂಕ್ ವೃತ್ತದಲ್ಲಿ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಧಿಕ್ಕಾರ ಕೂಗಿ ಎಚ್ಚರಿಕೆ ನೀಡಿದ್ದಾರೆ.
ಜೈನ ಮಂದಿರದ ಎದುರು ಹಾಕಿದ್ದ ಫ್ಲೆಕ್ಸ್ ಬ್ಯಾನರ್ನಲ್ಲಿ ಕನ್ನಡ ಬಳಕೆ ಮಾಡಿಲ್ಲ ಎಂಬ ಕಾರಣಕ್ಕೆ ಶುರುವಾದ ಗಲಾಟೆಗೆ ಸಂಸದ ತೇಜಸ್ವಿ ಸೂರ್ಯ ತುಪ್ಪಾ ಸುರಿಯುವ ಕೆಲಸ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿದ್ದು, ಅವರನ್ನು ತಕ್ಷಣಕ್ಕೆ ಬಿಡಬೇಕು ಎಂದು ಆಗ್ರಹಿಸಿ ನಗರದ ನಾನಾ ಭಾಗಗಳಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಧಿಕ್ಕಾರ ಕೂಗಿದರು. ನಾಡಿ ವಿರೋಧಿ ನಡೆಯನ್ನ ಮುಂದುವರೆಸಿದ್ರೇ ಅದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತೆ ಅಂತಾ ತೇಜಸ್ವಿ ಸೂರ್ಯಗೆ ಪ್ರತಿಭಟನಾಕಾರರು ಎಚ್ಚರಿಸಿದರು.