ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಟಿ.ಶಫಿಯುಲ್ಲಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣದ ವಿಚಾರಣೆಯು ಹೈಕೊರ್ಟ್ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆಯಿತು. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಜಿಗ್ನೇಶ್ ಮೇವಾನಿ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ವಾದ ಮಂಡಿಸಿ ದೂರಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಅಲ್ಲದೇ ಅರ್ಜಿದಾರರ ಪ್ರಚೋದನಕಾರಿ ಹೇಳಿಕೆಗೆ ಸಾಕ್ಷ್ಯಗಳು ಲಭ್ಯವಾಗಿವೆ. ಆದ್ದರಿಂದ ಈ ಹಂತದಲ್ಲಿ ಪ್ರಕರಣ ರದ್ದುಗೊಳಿಸಬಾರದು ಎಂದು ವಾದಿಸಿದರು. ಇನ್ನು ಮೇವಾನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.