ಕರ್ನಾಟಕ

karnataka

ETV Bharat / state

ಮಧ್ಯಾಹ್ನ 3.30 ರ ನಂತರ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಪ್ರವೇಶ: ಸರ್ಕಾರ ಆದೇಶ - ಬೆಂಗಳೂರು

ವಿಧಾನಸೌಧ, ವಿಕಾಸಸೌಧ ಮತ್ತು ಬಹು ಮಹಡಿ ಕಟ್ಟಡಗಳಿಗೆ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು ನಿರ್ದಿಷ್ಟ ಉದ್ದೇಶವನ್ನು ಹೊಂದಿ ಆಗಮಿಸುವ ಸಾರ್ವಜನಿಕರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.

Government order
ಮಧ್ಯಾಹ್ನ 3.30 ರ ನಂತರ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಪ್ರವೇಶ

By

Published : Jun 24, 2020, 11:34 PM IST

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಕೆಲ ನಿರ್ಬಂಧ ವಿಧಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.


ಸಚಿವಾಲಯದ ಕಟ್ಟಡಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಪ್ರತಿಯೊಂದು ಹಂತದಲ್ಲಿ ಸಹ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಆದಕಾರಣ ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತ ಹಿತದೃಷ್ಟಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹು ಮಹಡಿ ಕಟ್ಟಡಗಳಿಗೆ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು ನಿರ್ದಿಷ್ಟ ಉದ್ದೇಶವನ್ನು ಹೊಂದಿ ಆಗಮಿಸುವ ಸಾರ್ವಜನಿಕರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.

ಇವರು ಸಹ ಮಧ್ಯಾಹ್ನ 3.30 ರ ನಂತರ ಪ್ರವೇಶಿಸಲು ಅವಕಾಶ ಕಲ್ಪಿಸಿದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಮಧ್ಯಾಹ್ನ 3.30 ರ ಮೊದಲು ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ABOUT THE AUTHOR

...view details