ಕರ್ನಾಟಕ

karnataka

ETV Bharat / state

ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಶಿಫಾರಸು ಮಾಡಲು ಅವಕಾಶ - ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಶಿಫಾರಸು ಮಾಡಲು ಅವಕಾಶ

ಆನ್​ಲೈನ್​ ಮೂಲಕ ಸಾಧಕರ ಹೆಸರನ್ನು ಜನರು ಶಿಫಾರಸು ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾಹಿತಿ ನೀಡಿದರು. ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಜನರ ಹೆಸರುಗಳನ್ನು ನಮೂದಿಸಬೇಕು..

Sunil Kumar
ವಿ.ಸುನಿಲ್ ಕುಮಾರ್

By

Published : Sep 25, 2021, 5:54 PM IST

Updated : Sep 25, 2021, 6:43 PM IST

ಬೆಂಗಳೂರು :ಕನ್ನಡ ರಾಜ್ಯೋತ್ಸವದ ದಿನ ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾಹಿತಿ ನೀಡಿರುವುದು..

ಈ ಬಾರಿ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಈ ವರ್ಷ 66 ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಹೀಗಾಗಿ, ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಲು ಸಾರ್ವಜಕರಿಗೆ ಇಲಾಖೆ ಅವಕಾಶ ನೀಡಿದೆ. ಆನ್​ಲೈನ್​ ಮೂಲಕ ಸಾಧಕರ ಹೆಸರನ್ನು ಜನರು ಶಿಫಾರಸು ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಮಾಹಿತಿ ನೀಡಿದರು.

ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಜನರ ಹೆಸರುಗಳನ್ನು ನಮೂದಿಸಬೇಕು.

ಸಾಧಕರ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ವಾಸಸ್ಥಳ, ಸಂಪೂರ್ಣ ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ವಿವರಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ. ಸೇವಾ ಸಿಂಧು ಪೋರ್ಟನ್​ನಲ್ಲಿ ಸಾರ್ವಜಕರು ತಿಳಿಸುವ ಸಾಧಕರ ಹೆಸರುಗಳನ್ನು ತಜ್ಞರ ಸಮಿತಿಗೆ ನೀಡಲಾಗುತ್ತದೆ. ಅದನ್ನು ಅವರು ಪರಿಶೀಲನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಎಂದು ಪರಿಗಣಿಸಿದರೆ ಖಂಡಿತ ಅವರಿಗೆ ಪ್ರಶಸ್ತಿ ಸಿಗುತ್ತದೆ.

ಅದರ ಜೊತೆಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೇರವಾಗಿ ಸಾರ್ವಜನಿಕರೆ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ. ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು ಎಂದು ಸಚಿವರು ತಿಳಿಸಿದರು.

ಇದೇ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಇಲಾಖೆ ಕೈ ಹಾಕಿದೆ. ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತದೆ. ಸಾರ್ವಜನಿಕರು ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಅ.15ನೇ ದಿನಾಂಕದೊಳಗೆ ಕಳುಹಿಸಬೇಕು.

ಇದನ್ನೂ ಓದಿ: ನಾಳೆ‌ ಕುಪ್ಪೂರು ಗದ್ದುಗೆ ಶ್ರೀ ಅಂತ್ಯಕ್ರಿಯೆ : ಸಚಿವ ಜೆ.ಸಿ ಮಾಧುಸ್ವಾಮಿ

Last Updated : Sep 25, 2021, 6:43 PM IST

ABOUT THE AUTHOR

...view details