ಬೆಂಗಳೂರು: ಶಿರಸಿ-ಕುಮಟಾ ನಡುವಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಮೂಮೆಂಟ್, ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಪಶ್ಚಿಮ ಘಟ್ಟದ ಅರಣ್ಯ ಮಧ್ಯ ಇರುವ 5.5 ಮೀಟರ್ ಹೆದ್ದಾರಿಯನ್ನು 18 ಮೀಟರ್ಗೆ ವಿಸ್ತರಣೆ ಮಾಡುವ ನಿರ್ಧಾರವನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದ್ದು, ಹೆದ್ದಾರಿ ಅಗಲೀಕರಣಕ್ಕೆ ಶಾಸನಬದ್ದ ಸಮ್ಮತಿ ಇಲ್ಲ ಹಾಗೂ ಈ ರಸ್ತೆಯಲ್ಲಿ ಕಡಿಮೆ ಪ್ರಮಾಣದ ವಾಹನ ಸಂಚಾರ ಇದೆ. ಹೆದ್ದಾರಿ ಅಗಲೀಕರಣದಿಂದ 2 ಲಕ್ಷಕ್ಕೂ ಅಧಿಕ ಮರ ಕಡಿಯಲಾಗುತ್ತದೆ ಎಂದು ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ.