ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ/ವಿಡಿಯೋ ಮಾಡದಂತೆ ನಿಷೇಧಿಸಿ ಸರ್ಕಾರ ಆದೇಶಿಸಿದೆ. ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಅನುಮತಿಯಿಲ್ಲದೇ ಫೋಟೋ, ವಿಡಿಯೋ ತೆಗೆಯುವ ಹಾಗಿಲ್ಲ - Photography in government offices
ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯು ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶ ಹೊರಡಿಸಿದೆ.
ನೌಕರರ ಸಂಘದ ಮನವಿಯೇನು? ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು.
ಇದನ್ನೂ ಓದಿ:ರಾಜ್ಯದ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಹೀಗಿದೆ..