ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾಗೆ ಬಲಿ - ಬೆಂಗಳೂರು ಕೊರೊನಾ ಲೆಟೆಸ್ಟ್ ನ್ಯೂಸ್
ರಾಜ್ಯ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಇಂದು ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆಯ ಎಇಇ ಕೊರೊನಾದಿಂದ ಸಾವು
55 ವರ್ಷದ ಎಇಇ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇವರು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಇವರನ್ನು ಜು. 10ರಂದು ಕಿಮ್ಸ್ಗೆ ದಾಖಲು ಮಾಡಲಾಗಿದ್ದು, ಮರುದಿನ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಬೆಳಗ್ಗೆ ಆರಾಮಾಗಿದ್ದ ವ್ಯಕ್ತಿ, ಹೃದಯಾಘಾತದಿಂದ ಏಕಾಏಕಿ ಕುಸಿತು ಬಿದ್ದಿದ್ದರು. ಈ ವೇಳೆ ವೈದ್ಯರು ಏನೇ ಪ್ರಯತ್ನ ಮಾಡಿದರು ಸೋಂಕಿತ ಎಇಇ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.