ಬೆಂಗಳೂರು: ಶನಿವಾರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರಂನ ಪಿಯುಸಿ ಬೋರ್ಡ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸುವರು. ಎಸ್ಎಸ್ಎಲ್ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ರವಾನೆಯಾಗಲಿದೆ.
ಏಪ್ರಿಲ್ 22ರಿಂದ ಮೇ 18 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಈ ಪೈಕಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು-61,808 ಖಾಸಗಿ ವಿದ್ಯಾರ್ಥಿಗಳು 21,928 ಇದ್ದರು.