ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯು ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ.. ಏನೆಲ್ಲಾ ಬದಲಾವಣೆ? - ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ..

puc-exams-revised-time-table-released
ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ

By

Published : Feb 12, 2022, 6:12 PM IST

ಬೆಂಗಳೂರು :ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಈ ಹಿಂದೆ ಫೆಬ್ರವರಿ 8ರಂದು ಪ್ರಕಟಿಸಲಾಗಿತ್ತು.

ಆದರೆ, ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಒಂದೇ ವೇಳೆಯಲ್ಲಿ ಒಂದೇ ದಿನ ಎರಡು ವಿಷಯಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರೇಬಿಕ್ ವಿಷಯದ ಪರೀಕ್ಷೆಯನ್ನು ಮಾತ್ರ ಏ.29ಕ್ಕೆ ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ

ಪರಿಷ್ಕೃತ ವೇಳಾಪಟ್ಟಿ ಇಂತಿದೆ :

  1. ಏಪ್ರಿಲ್ 16 - ಗಣಿತ, ಶಿಕ್ಷಣ, ಮೂಲ ಗಣಿತ ಪರೀಕ್ಷೆಗಳು
  2. ಏಪ್ರಿಲ್ 18 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  3. ಏಪ್ರಿಲ್ 19 - ಮಾಹಿತಿ ತಂತ್ರಜ್ಞಾನ
  4. ಏಪ್ರಿಲ್ 20 - ಇತಿಹಾಸ, ಭೌತಶಾಸ್ತ್ರ
  5. ಏಪ್ರಿಲ್ 21 - ದ್ವಿತೀಯ ಭಾಷೆ
  6. ಏಪ್ರಿಲ್ 22 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  7. ಏಪ್ರಿಲ್ 23 - ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  8. ಏಪ್ರಿಲ್ 25 - ಅರ್ಥಶಾಸ್ತ್ರ
  9. ಏಪ್ರಿಲ್ 26 - ಹಿಂದಿ
  10. ಏಪ್ರಿಲ್ 28 - ಕನ್ನಡ
  11. ಏಪ್ರಿಲ್ 29 - ಅರೇಬಿಕ್​
  12. ಏಪ್ರಿಲ್ 30 - ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್
  13. ಮೇ 2 - ಭೂಗೋಳಶಾಸ್ತ್ರ, ಜೀವಶಾಸ್ತ್ರ
  14. ಮೇ 4 - ಇಂಗ್ಲಿಷ್​
  15. ಮೇ 6 - ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ABOUT THE AUTHOR

...view details