ಕರ್ನಾಟಕ

karnataka

ETV Bharat / state

ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ... ಸುಮಾರು 6 ಲಕ್ಷ ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆ! - ಇಂದು ಪಿಯುಸಿ ಇಂಗ್ಲಿಷ್​ ಪರೀಕ್ಷೆ

ಇಂದು ರಾಜ್ಯಾದ್ಯಂತ ದ್ವಿತೀಯ ಪಿಯು ಇಂಗ್ಲಿಷ್​ ಪರೀಕ್ಷೆ ನಡೆಯಲಿದ್ದು, ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಸಾಧ್ಯತೆ ಇದೆ.

PUC student ready for exam, PUC student ready for english exam,  PUC english exam, PUC english exam today, PUC english exam news, ಪಿಯುಸಿ ಇಂಗ್ಲಿಷ್​ ಪರೀಕ್ಷೆ, ಇಂದು ಪಿಯುಸಿ ಇಂಗ್ಲಿಷ್​ ಪರೀಕ್ಷೆ, ಪಿಯುಸಿ ಇಂಗ್ಲಿಷ್​ ಪರೀಕ್ಷೆ ಸುದ್ದಿ,
ಸಂಗ್ರಹ ಚಿತ್ರ

By

Published : Jun 18, 2020, 5:58 AM IST

ಬೆಂಗಳೂರು: ಇಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ರಾಜ್ಯಾದ್ಯಂತ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬ್ಲಾಕ್​ಗಳನ್ನು ಪರೀಕ್ಷಾ ಕೇಂದ್ರಗಳಾಗಿ ಸ್ಥಾಪಿಸಲಾಗುತ್ತದೆ ಎಂದು ಪಿಯುಸಿ ಶಿಕ್ಷಣ ಇಲಾಖೆ ತಿಳಿಸಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸರ್​ಗಳಿಂದ ಸ್ವಚ್ಛಗೊಳಿಸಲಾಗಿದೆ. ಸುಮಾರು 18 ಸಾವಿರದ 524 ವಿದ್ಯಾರ್ಥಿಗಳು ಹಾಸ್ಟೆಲ್​ಗಳಲ್ಲಿ ವಾಸಿಸುತ್ತಿದ್ದು, ವಲಸೆ ಕಾರ್ಮಿಕರ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲು ಅವಕಾಶ ನೀಡಲಾಗಿದೆ.

ಪಕ್ಕದ ರಾಜ್ಯಗಳ 1,889 ವಿದ್ಯಾರ್ಥಿಗಳಿಗೆ ಗಡಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ಹೆಚ್ಚುವರಿ ಪರೀಕ್ಷಾ ಕೊಠಡಿ ಪ್ರವೇಶ ಪತ್ರವನ್ನು ಇಲಾಖೆಯ ವೆಬ್ ಸೈಟ್ www.puc.kar.nic.in ನಿಂದ ಪಡೆದುಕೊಳ್ಳಬಹುದಾಗಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಾಯವಾಣಿಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು 9449363892/ 9035034671/08182-276904 ಗೆ ಕರೆಮಾಡಬಹುದು.

ABOUT THE AUTHOR

...view details