ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಸಚಿವ ಶ್ರೀರಾಮುಲು ಚಾಲನೆ.. - Health Minister Sriramulu
ಕೆಲವರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಮಾಡಲು ಸಾಮಾಜಿಕ ಜಾಲತಾಣಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯ ಬಗ್ಗೆ ಕೆಟ್ಟ ಸುದ್ದಿ ಹರಡುತ್ತಿದ್ದಾರೆ. ಇಂತಹ ಸುದ್ದಿಗೆ ಗಮನ ಕೊಡದೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವಂತೆ ಮನವಿ ಮಾಡಿದರು. ಇದರ ಜೊತೆಗೆ ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಪಲ್ಸ್ ಪೋಲಿಯೋ ಕಾರ್ಯಕ್ರಮ, ಸಚಿವ ಶ್ರೀರಾಮುಲುರಿಂದ ಚಾಲನೆ
ಬೆಂಗಳೂರು:ಚಿಕ್ಕಜಾಲದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಮ್ಮ ಮಗಳು ರಕ್ಷಿತಾ, ಮಗ ದೀಕ್ಷಿತ್ ಜೊತೆಗೂಡಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿ ಇಂದು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.