ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕುರಿತು ತಪ್ಪು ಸಂದೇಶ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ನಗರ ಆಯಕ್ತ ಭಾಸ್ಕರ್ರಾವ್ ಅವರು ಈಗಾಗಲೇ ಸೂಚನೆ ನೀಡಿದ್ದರು. ಆದರೆ, ಟ್ವಿಟರ್ನಲ್ಲೇ ಕಮಿಷನರ್ ಹಾಗೂ ನೆಟ್ಟಿಗರ ನಡುವೆ ಜಟಾಪಟಿ ಏರ್ಪಟ್ಟಿದೆ.
ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ನಲ್ಲಿದ್ದ ಶೇ 97ರಷ್ಟು ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸುದ್ದಿ ಮೂಲಗಳಿಂದ ತಿಳಿದುಬರುತ್ತಿದೆ ಎಂದು ನೆಟ್ಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾಸ್ಕರ್ರಾವ್, ನೀವು ಟ್ವೀಟ್ ಮಾಡಿದ ಮಾಹಿತಿ ಬಗ್ಗೆ ತನಿಖೆ ಮಾಡ್ತೀವಿ. ಹಾಗೆಯೇ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಈ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ಸಹ ಕೊಟ್ಟಿದ್ದಾರೆ.