ಬೆಂಗಳೂರು: ಮುಂದಿನ ಸಿಎಂ ಆಯ್ಕೆಯಲ್ಲಿ ನಾವೆಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು. ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಗೆ ಕರೆ ಬಂದಿದೆ. ಬೆಂಗಳೂರಿನಲ್ಲಿ ಇರುವ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಶಾಸಕರ ಅಭಿಪ್ರಾಯವನ್ಮು ಪಡೆಯಲಾಗುತ್ತದೆ. ನಂತರ ಮುಂದಿನ ಸಿಎಂ ಯಾರು ಎಂಬುವುದನ್ನು ಕೇಂದ್ರ ನಿರ್ಧಾರ ಮಾಡಲಿದೆ ಎಂದರು.
ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ : ಆರ್. ಅಶೋಕ್ - ಮಾಜಿ ಸಚಿವ ಆರ್. ಅಶೋಕ್
ಶಾಸಕಾಂಗ ಪಕ್ಷದ ಸಭೆಗೆ ಕರೆ ಬಂದಿದೆ. ಬೆಂಗಳೂರಿನಲ್ಲಿ ಇರುವ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂಬಂಧ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.
ಮಾಜಿ ಸಚಿವ ಆರ್. ಅಶೋಕ್
ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಕೂಡಾ ಅರ್ಹರಾಗಿದ್ದಾರೆ. ಪ್ರತಿಯೊಬ್ಬರೂ ಸಿಎಂ ಆಕಾಂಕ್ಷಿಗಳೇ. ಆದರೆ, ಅಂತಿಮ ನಿರ್ಧಾರ ಹೈಕಮಾಂಡ್ ಮಾಡಲಿದೆ ಎಂದರು.
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಜಾತಿ ಆಧಾರದಲ್ಲಿ ಚರ್ಚೆ ಆಗಿಲ್ಲ. ಚಾಕಚಕ್ಯತೆ ಇರುವವರಿಗೆ ಹೈಕಮಾಂಡ್ ಸ್ಥಾನ ನೀಡುತ್ತದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
Last Updated : Jul 27, 2021, 2:24 PM IST