ಬೆಂಗಳೂರು:ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ಯಾರೇ ಆಗಲಿ ಬಹಿರಂಗವಾಗಿ ಹೇಳಿಕೆ ನೀಡುವುದು ಬಿಜೆಪಿ ಸಂಪ್ರದಾಯಗಳಿಗೆ ವಿರುದ್ಧವಾಗಿದೆ. ಸಮಸ್ಯೆಗಳಿದ್ದರೆ ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ಜೊತೆ ಮಾತನಾಡಿ ಪರಿಹರಿಸಿಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕಂದಾಯ ಸಚಿವ ಆರ್. ಅಶೋಕ್ ಸಲಹೆ ನೀಡಿದ್ದಾರೆ.
ಬಾಬೂರಾವ್ ದೇಶಪಾಂಡೆ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರಾದವರಿಗೆ ತಾಳ್ಮೆ ಬಹಳ ಮುಖ್ಯ. ಯಾರೂ ಕೂಡ ತಾಳ್ಮೆ ಕಳೆದುಕೊಳ್ಳಬಾರದು. ನಮ್ಮದು ಬಿಜೆಪಿ ಸರ್ಕಾರ, ಕೇಂದ್ರದ ನಾಯಕತ್ವ ಬಹಳ ಬಲಿಷ್ಟವಾಗಿದೆ. ಹಾಗಾಗಿ ಕೇಂದ್ರ ನಾಯಕರ ಮತ್ತು ರಾಜ್ಯಾಧ್ಯಕ್ಷರ ಅನುಮತಿಯಿಲ್ಲದೆ ಯಾರೂ ಕೂಡ ಮನಸ್ಸು ಬಂದಂತೆ ಮಾತನಾಡುವುದು, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡುವುದು ಸರಿಯಲ್ಲ.