ಬೆಂಗಳೂರು: ನೆರೆ ಪರಿಹಾರ ಸಂಬಂಧ ಸಂಪುಟ ಉಪ ಸಮಿತಿ ಸಭೆ ಇಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆಯಿತು.
ನೆರೆ ಪರಿಹಾರ ಉಪ ಸಮಿತಿಯ ಉನ್ನತಮಟ್ಟದ ಸಭೆ ನಡೆಸಿದ ಆರ್.ಅಶೋಕ್ - health minister
ನೆರೆ ಪರಿಹಾರ ಸಂಬಂಧ ಸಂಪುಟ ಉಪ ಸಮಿತಿ ಸಭೆ ಇಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಸಭೆಯಲ್ಲಿ ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರೆ ನೈಸರ್ಗಿಕ ವಿಪತ್ತುಗಳಿಂದ ಉದ್ಭವಿಸಿರುವ ಸಮಸ್ಯೆಗಳ ಕುರಿತು ಪರಾಮರ್ಶಿಸಲಾಯಿತು.
ಕೇಂದ್ರದಿಂದ ಈಗಾಗಲೇ ನೆರೆ ಪರಿಹಾರವಾಗಿ 1200 ಕೋಟಿ ರೂ. ಬಿಡುಗಡೆಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ವಿತರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ನೆರೆ ಹಾಗೂ ಬರ ಪರಿಹಾರ ಒದಗಿಸಲಾಗುವುದು. ಜೊತೆಗೆ ಹೆಚ್ಚುವರಿ ಅನುದಾನದ ಬಗ್ಗೆ ಕೂಡ ಕೇಂದ್ರದ ಗಮನ ಸೆಳೆಯುವುದರ ಬಗ್ಗೆಯು ಸಭೆಯಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.