ಬೆಂಗಳೂರು : ತುಳಸಿ ಮುನಿರಾಜು ಗೌಡಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ.
ತುಳಸಿ ಮುನಿರಾಜುಗೆ ಕೈ ತಪ್ಪಿದ ಟಿಕೆಟ್: ಆರ್.ಆರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೀನಾಮೆ..! - ಆರ್.ಆರ್ ನಗರ ಬಿಜೆಪಿಯಲ್ಲಿ ಬಿರುಕು
ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಬಂಡೆಪ್ಪ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶಿವಣ್ಣಗೌಡರಿಗೆ ರವಾನಿಸಿದ್ದಾರೆ.
ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಬಂಡೆಪ್ಪ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶಿವಣ್ಣಗೌಡರಿಗೆ ರವಾನಿಸಿದ್ದಾರೆ.
ಕಳೆದ 12 ವರ್ಷಗಳಿಂದ ನಾನು ಪಕ್ಷಕ್ಕಾಗಿ ದುಡಿದ್ದೇನೆ. ಪಕ್ಷದಲ್ಲಿ ನಿಷ್ಠಾವಂತರಾಗಿದ್ದ ತುಳಸಿ ಮುನಿರಾಜುಗೌಡರಿಗೆ ಟಿಕೆಟ್ ಸಿಗದ ಕಾರಣ, ನೊಂದು ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆರ್.ಆರ್.ನಗರದಲ್ಲಿ ಪಕ್ಷ ಕಟ್ಟಲು, ಕಾರ್ಯಕರ್ತರ ಬೆನ್ನೆಲುಬಾಗಿ ನಿಂತ ತುಳಸಿ ಮುನಿರಾಜು ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದೇ ಇರುವುದು ನನ್ನಂಥ ಹಲವು ಕಾರ್ಯಕರ್ತರಿಗೆ ನೋವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.