ಬೆಂಗಳೂರು:ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಆರ್.ಶಂಕರ್, ರುದ್ರೇಶ್ ಮತ್ತು ಉಮೇಶ್ ಕತ್ತಿ ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.
ಸಿಎಂ ಬಿಎಸ್ವೈ ಭೇಟಿ ಮಾಡಿದ ರುದ್ರೇಶ್, ಆರ್.ಶಂಕರ್, ಉಮೇಶ್ ಕತ್ತಿ - cm yeddyurappa meet banglore news
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಆರ್.ಶಂಕರ್, ರುದ್ರೇಶ್ ಮತ್ತು ಉಮೇಶ್ ಕತ್ತಿ ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಆರ್.ಶಂಕರ್ ಅವರನ್ನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರಾಗಿ ಮಾಡ್ತೀವಿ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಫೆಬ್ರವರಿ 6ರಂದೇ ಸಚಿವರನ್ನಾಗಿ ಮಾಡಿ ಎಂದು ಪಟ್ಟು ಹಿಡಿದಿರುವ ಶಂಕರ್, ಮತ್ತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಬಿಎಸ್ವೈ ಅವರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದ್ದು, ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನ ನೀಡದಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅಸಮಾಧಾನಿತ ಶಾಸಕರ ಸಭೆಯಲ್ಲಿದ್ದ ರುದ್ರೇಶ್, ಇದೀಗ ಸಿಎಂ ಭೇಟಿಯಾಗಿ ಸಚಿವ ಸ್ಥಾನ ನೀಡದಂತೆ ಒತ್ತಡ ಹಾಕಿದ್ದಾರಂತೆ.