ಕರ್ನಾಟಕ

karnataka

ETV Bharat / state

ರಾಗಿಣಿ ಜಾಮೀನು ಅರ್ಜಿ ವಿಚಾರಣೆ: ವಿವರ ಕೇಳಿ ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ - ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಜಾಮೀನಿಗಾಗಿ ನಟಿ ರಾಗಿಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇಂದು ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿದೆ. ಬಳಿಕ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಅರ್ಜಿಯ ಕುರಿತು ವಿವರಣೆ ಕೇಳಿದೆ.

government
‘ಸುಪ್ರೀಂ’ ನೋಟಿಸ್

By

Published : Dec 4, 2020, 3:23 PM IST

ನವದೆಹಲಿ: ಸ್ಯಾಂಡಲ್​ವುಡ್​ಗೆ ಡ್ರಗ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಇಂದು ನಟಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಅರ್ಜಿಯ ಕುರಿತು ವಿವರಣೆ ಕೇಳಿದೆ.

ಕಳೆದ ನವೆಂಬರ್ 3ರಂದು ನಟಿಯರಾದ ಸಂಜನಾ ಮತ್ತು ರಾಗಿಣಿ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಹಾಗಾಗಿ ರಾಗಿಣಿ ಬೇಲ್​ಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ABOUT THE AUTHOR

...view details