ಕರ್ನಾಟಕ

karnataka

ETV Bharat / state

108 ಸೇವೆಯಲ್ಲಿ ಅಮೂಲಾಗ್ರ ಬದಲಾವಣೆ; ಜಾಗತಿಕ ಟೆಂಡರ್​ಗೆ ಅಸ್ತು - Radical changes in 108 service: Health Minister Sudhakar

108 ಆಂಬ್ಯುಲೆನ್ಸ್ ಸೇವೆಗೆ ರಾಜ್ಯಸರ್ಕಾರ ದೊಡ್ಡ ಮೊತ್ತದ ಹಣ ನೀಡುತ್ತದೆ. ಆದರೆ ಅದಕ್ಕೆ ತಕ್ಕಂತೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿಗೊಳಿಸಬೇಕಿದೆ ಎಂದಿರುವ ಸಚಿವರು, ಮುಂದಿನ ಟೆಂಡರ್ ಪ್ರಕ್ರಿಯೆ ವೇಳೆ ಗಮನಿಸಬೇಕಾದ ಹಲವು ಅಂಶಗಳನ್ನು ಸೂಚಿಸಿದ್ದಾರೆ.

Radical changes in 108 service: Health Minister Sudhakar
108 ಸೇವೆಯಲ್ಲಿ ಅಮೂಲಾಗ್ರ ಬದಲಾವಣೆ ಆರೋಗ್ಯ ಸಚಿವ ಸುಧಾಕರ್ ಸೂಚನೆ

By

Published : Nov 6, 2020, 7:21 PM IST

ಬೆಂಗಳೂರು: ರಾಜ್ಯದಾದ್ಯಂತ ಗುಣಮಟ್ಟದ ಆಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ತುರ್ತು ಆರೋಗ್ಯ ಸೇವೆ ನೀಡುವ ಆಂಬ್ಯುಲೆನ್ಸ್​ಗಳ ಸೇವೆ ಮಹತ್ವದ್ದಾಗಿದೆ. ಸದ್ಯ ನಮ್ಮಲ್ಲಿರುವ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪಗಳಿದ್ದು, ಅವುಗಳನ್ನು ನಿವಾರಿಸಿ ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ಅಳವಡಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

108 ಆಂಬ್ಯುಲೆನ್ಸ್ ಸೇವೆಗೆ ರಾಜ್ಯಸರ್ಕಾರ ದೊಡ್ಡ ಮೊತ್ತದ ಹಣ ನೀಡುತ್ತದೆ. ಆದರೆ ಅದಕ್ಕೆ ತಕ್ಕಂತೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿಗೊಳಿಸಬೇಕಿದೆ. ಅದಕ್ಕಾಗಿ ಹೊಸದಾಗಿ ಟೆಂಡರ್ ನೀಡುವಾಗ ಲೋಪಗಳಿಗೆ ಅವಕಾಶವಿಲ್ಲದಂತೆ ಜಾಗತಿಕ ಮಟ್ಟದ ಸೇವೆ ನೀಡುವ ಸಂಸ್ಥೆ/ ಕಂಪನಿಗಳ ಒಕ್ಕೂಟಕ್ಕೆ ಗುತ್ತಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ವಲಯದ ಐಡೆಕ್ ಕಂಪನಿ ಪ್ರತಿನಿಧಿಗಳು, ತಜ್ಞರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಗುತ್ತಿಗೆ ಕರಾರು ಕರಡು ಕುರಿತು ಶುಕ್ರವಾರ ಸಭೆ ನಡೆಸಿದ ಸಚಿವರು ಈ ಸೂಚನೆ ನೀಡಿದರು.

ಸಚಿವರು ಸಭೆಯಲ್ಲಿ ನೀಡಿದ ಸೂಚನೆಗಳೇನು?

ಜಾಗತಿಕ ಮಟ್ಟದಲ್ಲೇ ಟೆಂಡರ್ ಕರೆಯಬೇಕು. ಯಾವ ಹಂತದಲ್ಲೂ ಲೋಪಗಳಿಗೆ ಅವಕಾಶ ಇರಲೇಬಾರದು. ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳು ಮಾತ್ರವೇ ಬಿಡ್​​ನಲ್ಲಿ ಪಾಲ್ಗೊಳ್ಳಲು ಅವಕಾಶ ಇರುವಂತಹ ಷರತ್ತುಗಳನ್ನು ವಿಧಿಸಬೇಕು ಎಂದರು.

ಒಂದು ಲಕ್ಷ ಜನಸಂಖ್ಯೆಯನ್ನು ಮಾನದಂಡವಾಗಿ ಇಟ್ಟುಕೊಳ್ಳುವ ಬದಲಿಗೆ ಭೌಗೋಳಿಕ ಸವಾಲು ಮತ್ತು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕರಾರು ವಿಧಿಸಬೇಕು. ಕರೆ/ ಸಂದೇಶ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ರೋಗಿಯನ್ನು ಕರೆದೊಯ್ಯುವಂತಿರಬೇಕು ಎಂದರು.

ಆಂಬ್ಯುಲೆನ್ಸ್ ನಿಗದಿ ಆಗುವ ಮೊದಲು ಕಾಲ್ ಸೆಂಟರ್​​​ನಲ್ಲಿ ಕರೆ ಸ್ವೀಕರಿಸಿ ಸಮೀಪದಲ್ಲಿ ಇರುವುದನ್ನು ಕಳುಹಿಸಬೇಕು. ಪ್ರಾಥಮಿಕ ಚಿಕಿತ್ಸೆ ನೀಡುವ ಸಿಬ್ಬಂದಿ ಇರಲೇಬೇಕು. ಊಬರ್ ಮತ್ತು ಓಲಾ ಮಾದರಿಯ ಆ್ಯಪ್ ವ್ಯವಸ್ಥೆ ಇರಬೇಕು. ಹಿಂದೆ ಜಿವಿಕೆ ಸಂಸ್ಥೆಗೆ ಗುತ್ತಿಗೆ ನೀಡಿದಾಗ ಮಾರುಕಟ್ಟೆಯಲ್ಲಿ ಸ್ಪರ್ಧೆ ಇರಲಿಲ್ಲ. ಈಗ ಅನೇಕ ಸಂಸ್ಥೆಗಳು ಸೇವೆ ನೀಡಲು ಮುಂದಾಗಿವೆ. ಪ್ರಾಥಮಿಕ ಹಂತದ ಚರ್ಚೆಗೆ 20ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ. ಜಿಪಿಎಸ್, ಬಯೋಮೆಟ್ರಿಕ್, ಕಾಲ್ ಸೆಂಟರ್ ವ್ಯವಸ್ಥೆ ಸದೃಢವಾಗಿರಬೇಕು. ವಾಹನಗಳ ಹೊಣೆ ಮತ್ತು ಐಟಿ ಪ್ರತ್ಯೇಕವಾಗಿ ಗುತ್ತಿಗೆ ನೀಡಬೇಕೆ, ಬೇಡವೇ? ಯಾವುದು ಹೆಚ್ಚು ಉಪಯೋಗ ಎಂಬ ಅಧ್ಯಯನ ಮಾಡಬೇಕು ಎಂದು ಸೂಚನೆ ನೀಡಿದರು.

ABOUT THE AUTHOR

...view details