ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಹಂಗಾಮಿ ಸಭಾಪತಿಯಾಗಿ ಹಿರಿಯ ಸದಸ್ಯ ರಘುನಾಥ ರಾವ್ ಮಲ್ಕಾಪುರೆ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಹಂಗಾಮಿ ಸಭಾಪತಿ ಅವರನ್ನು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತು ಪರಿಷತ್ ಸಚಿವಾಲಯದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.
ಬಸವರಾಜ ಹೊರಟ್ಟಿ ಅವರು ನಿನ್ನೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹಂಗಾಮಿ ಸಭಾಪತಿಯಾಗಿ ರಘುನಾಥ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಮೇಲ್ಮನೆಗೆ ಉಪ ಸಭಾಪತಿ ಸ್ಥಾನ ಖಾಲಿ ಆಗಿರುವುದರಿಂದ ರಾಜೀನಾಮೆ ಅಂಗೀಕಾರ ಆಗಿರಲಿಲ್ಲ. ಬಸವರಾಜ ಹೊರಟ್ಟಿ ಅವರು ತಮ್ಮ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರ ಮಾಡಬೇಕಿರುವುದರಿಂದ ಹಂಗಾಮಿ ಸಭಾಪತಿ ಅವರನ್ನು ನೇಮಕ ಮಾಡಲಾಗಿದೆ.