ಬೆಂಗಳೂರು:ಸ್ಯಾಂಡಲ್ವುಡ್ಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ರಾಗಿಣಿ ದ್ವಿವೇದಿ ಹೊಸದಾಗಿ ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಸ್ಯಾಂಡಲ್ವುಡ್ಗೆ ಡ್ರಗ್ಸ್ ಲಿಂಕ್ ಆರೋಪ: A2 ರಾಗಿಣಿ, A5 ವೈಭವ್ ಕೋರ್ಟ್ಗೆ ಜಾಮೀನು ಅರ್ಜಿ - ಬೆಂಗಳೂರು
ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣದ ಎ2 ರಾಗಿಣಿ ದ್ವಿವೇದಿ ಹಾಗೂ ಎ5 ವೈಭವ್ ಜೈನ್ ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮುಂಬೈ ಮೂಲದ ವಕೀಲರಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಳೆ ಸಿಸಿಹೆಚ್ 33 ನೇ ಕೋರ್ಟ್ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಸದ್ಯ ನಟಿ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿದ್ದು, ಮಡಿವಾಳದಲ್ಲಿ ಸಿಸಿಬಿ ವಿಚಾರಣೆ ಮುಂದುವರೆದಿದೆ.
ಇದರ ಜೊತೆ ಪ್ರಕರಣದ ಆರೋಪಿ ವೈಭವ್ ಜೈನ್ ಕೂಡಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಪ್ರಕರಣದ ಐದನೇ ಆರೋಪಿಯಾಗಿರುವ ವೈಭವ್ ಜೈನ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದಾನೆ. ಸ್ಯಾಂಡಲ್ವುಡ್ನಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೊದಲು ಕೊರೊನಾದಿಂದಾಗಿ ಹೋಂ ಕ್ವಾರಂಟೈನ್ ಆಗಿರುವುದಾಗಿ ನೆಪ ಹೇಳಿದ್ದ. ಬಳಿಕ ಎಸ್ಕೇಪ್ ಆಗಿರುವ ಆರೋಪಿ ಜೈನ್ ತನ್ನ ಪರ ವಕೀಲರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಳೆ ಸಿಸಿಹೆಚ್ 33 ನೇ ಕೋರ್ಟ್ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.