ಕರ್ನಾಟಕ

karnataka

ETV Bharat / state

ಜಾಮೀನು ಕೋರಿ ರಾಗಿಣಿ ಅರ್ಜಿ: ಪೊಲೀಸರಿಗೆ ಹೈಕೋರ್ಟ್ ನೋಟಿಸ್ - Ragini drugs case

ಕಳೆದ ಸೆ.28ರಂದು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆ ರಾಗಿಣಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಪೀಠ, ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಅಕ್ಟೋಬರ್ 23ಕ್ಕೆ ವಿಚಾರಣೆ ಮುಂದೂಡಿದೆ.

ragini
ರಾಗಿಣಿ

By

Published : Oct 17, 2020, 10:19 PM IST

ಬೆಂಗಳೂರು :ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕಳೆದ ಸೆ.28ರಂದು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆ ರಾಗಿಣಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಪೀಠ, ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಅಕ್ಟೋಬರ್ 23ಕ್ಕೆ ವಿಚಾರಣೆ ಮುಂದೂಡಿದೆ.

ರಾಗಿಣಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅವರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷಾಧಾರ ಹಾಗೂ ದಾಖಲೆ ಇಲ್ಲ. ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಕಳೆದೊಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.

ABOUT THE AUTHOR

...view details