ಕರ್ನಾಟಕ

karnataka

ETV Bharat / state

ದೂರವಾಣಿ ಮೂಲಕ ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ - ಮಣಿಪಾಲ್ ಆಸ್ಪತ್ರೆ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮೂಲಕ ಕರ್ನಾಟಕದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.

ರಾಹುಲ್ ಗಾಂಧಿ- ಸಿದ್ದರಾಮಯ್ಯ
ರಾಹುಲ್ ಗಾಂಧಿ- ಸಿದ್ದರಾಮಯ್ಯ

By

Published : Aug 9, 2020, 1:46 PM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಸಿದ್ದರಾಮಯ್ಯ ಕಳೆದ ಮಂಗಳವಾರ ರಾತ್ರಿ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ಸಂದರ್ಭ ಇವರಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಇದಾದ ಎರಡು ದಿನ ಬಳಿಕ ಇವರ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಅವರಿಗೂ ಕೊರೊನಾ ಇರುವುದು ದೃಢಪಟ್ಟಿದೆ.

ಸದ್ಯ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಆರೋಗ್ಯ ಸಾಕಷ್ಟು ಸುಧಾರಿಸಿದ್ದು, ಸದ್ಯವೇ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ.

ABOUT THE AUTHOR

...view details