ಬೆಂಗಳೂರು: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೆಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶದ ಪೊಲೀಸರು ತಡೆ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ, ರಾಹುಲ್ ಗಾಂಧಿಯವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಮ್ಮ ನಾಯಕ ರಾಹುಲ್ ಗಾಂಧಿ ಮೇಲೆ ಯುಪಿ ಪೊಲೀಸರು ನಡೆಸಿರುವ ಹಲ್ಲೆಯನ್ನ ನಾನು ಖಂಡಿಸುತ್ತೇನೆ. ಅಥ್ರಾಸ್ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ಅವರು ಹೋರಾಡುತ್ತಿದ್ದಾರೆ. ಯಾವ ಕಾನೂನಿನಡಿ ಅವರನ್ನ ಬಂಧಿಸಲಾಗಿದೆ? ಯಾಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಸಂತ್ರಸ್ತೆ ಕುಟುಂಬವನ್ನ ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ? ಇದೀಗ ಪ್ರಧಾನಿ ಮೋದಿ ಬೇಟಿ ಬಚಾವೋ ಬಗ್ಗೆ ಪ್ರಧಾನಿ ಮೋದಿ ಯಾಕೆ ಮಾತನಾಡುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.