ಬೆಂಗಳೂರು:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ರಾಜ್ಯಕ್ಕೆ ರಾಹುಲ್: ಬೆಂಗಳೂರು, ಕಲಬುರಗಿಗೆ ಭೇಟಿ - ಟೆಕ್ ಪಾರ್ಕ್
ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ
ನಾಳೆ ಮಧ್ಯಾಹ್ನ 12.30ಕ್ಕೆ ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ಬೃಹತ್ ರಾಲಿಯಲ್ಲಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಸಂಜೆ 5 ಗಂಟೆಗೆ ಬೆಂಗಳೂರಿನ ವಾಣಿಜ್ಯೋದ್ಯಮಿಗಳ ಜೊತೆ ಉದ್ಯಮದ ಅಗತ್ಯಗಳ ಕುರಿತು ಚರ್ಚಿಸುವರು. ಬೆಂಗಳೂರಿನ ಹೆಬ್ಬಾಳ ಸಮೀಪ ಇರುವ ಥಣಿಸಂದ್ರದ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸಭೆ ನಡೆಯಲಿದೆ. ವಿವಿಧ ಬಹುರಾಷ್ಟ್ರೀಯ ಹಾಗೂ ವಾಣಿಜ್ಯೋದ್ಯಮ ಕಂಪನಿಗಳ ಮುಖ್ಯಸ್ಥರ ಜತೆ ರಾಹುಲ್ ಸಂವಾದ ನಡೆಸಲಿದ್ದಾರೆ. ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.