ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮುಂದಿನ 5 ದಿನ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್​.. ಹವಾಮಾನ ಇಲಾಖೆ ಮುನ್ಸೂಚನೆ - ಈಟಿವಿ ಭಾರತ ಕರ್ನಾಕಟ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

rain-fall-in-state-for-the-next-5-days
ರಾಜ್ಯದಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

By

Published : Apr 26, 2023, 8:38 PM IST

ರಾಜ್ಯದಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು:ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇರುವುದರಿಂದ 5 ದಿನಗಳ ಕಾಲ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲಿನ ಸುಳಿಗಳು ಸೈಕ್ಲೋನ್ ರೂಪ ಪಡೆದುಕೊಳ್ಳಬಹುದು. ಈ ಕಾರಣದಿಂದ ಏಪ್ರಿಲ್ 30ರವರೆಗೆ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಂದಿದೆ.

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಆಗುವ ಕಾರಣಕ್ಕೆ ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಜನರಿಗೆ ನೆರವು ಘೋಷಿಸಿದ ರಾಜ್ಯ ಸರ್ಕಾರಗಳು

ABOUT THE AUTHOR

...view details