ಬೆಂಗಳೂರು:ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಲೇ ಮಳೆರಾಯ ಅಬ್ಬರಿಸುತ್ತಿದ್ದ. ಇಂದು ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ.
ಬೆಂಗಳೂರಲ್ಲಿ ಮಧ್ಯಾಹ್ನವೇ ಅಬ್ಬರಿಸಿದ ವರುಣ: ಇನ್ನೂ 2 ದಿನ ಮಳೆ ಮುನ್ಸೂಚನೆ - ಬೆಂಗಳೂರು ನಗರದಲ್ಲಿ ಮಳೆ
ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನ ಮಳೆಯಾಗಿದೆ.
ಬೆಂಗಳೂರಿನ ವಿವಿದಡೆ ಮಳೆಯಾಗಿದೆ
ನಗರದ ಫ್ರೀಡಂ ಪಾರ್ಕ್, ಕೆ.ಆರ್.ವೃತ್ತ, ಕಾರ್ಪೋರೇಷನ್ ವೃತ್ತ, ಮೈಸೂರು ರಸ್ತೆ, ಜಯನಗರ, ಲಾಲ್ ಬಾಗ್ ರಸ್ತೆಯಲ್ಲಿ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.