ಬೆಂಗಳೂರು: ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದೆ. ಕಬ್ಬನ್ ಪಾರ್ಕ್, ಶಿವಾಜಿನಗರ, ಜಯನಗರ, ಯಶವಂತಪುರ, ಗಾಂಧಿನಗರ, ಮೆಜೆಸ್ಟಿಕ್, ಹೆಬ್ಬಾಳ, ಕಾರ್ಪೋರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಮಳೆ - ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮಳೆ
ಬೆಂಗಳೂರು ನಗರದಲ್ಲಿ ಇಂದು ಸಂಜೆಯಿಂದ ಗುಡುಗು ಸಹಿತ ಮಳೆ ಪ್ರಾರಂಭವಾಗಿದೆ. ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಮಳೆ
ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ವಾಹನ ಸವಾರರು ಫ್ಲೈ ಓವರ್, ಅಂಗಡಿ ಮುಂಗಟ್ಟುಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ.
ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಕಂಟ್ರೋಲ್ ರೂಂ ತಿಳಿಸಿದೆ.