ಕರ್ನಾಟಕ

karnataka

ETV Bharat / state

ರಾಜ್ಯದ ಹಲವೆಡೆ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ - Bangalore rain

ಮಲೆನಾಡು ಜಿಲ್ಲೆಗಳಿಗೆ ಸೆ.19 ರಿಂದ 21ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗಬಹುದು. ಇನ್ನು ಕರಾವಳಿ ಪ್ರದೇಶದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಸೆ.18 ರಿಂದ 21ರ ವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

Rain in many parts of the state: Orange alert announced on the coast
ರಾಜ್ಯದ ಹಲವೆಡೆ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

By

Published : Sep 17, 2020, 7:19 PM IST

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಅಲ್ಲದೆ ಉ.ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಸೆ.17ರಿಂದ 21ರ ವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಸೆ.20, 21ರಂದು ವ್ಯಾಪಕ ಮಳೆಯಾಗಲಿದೆ. ಸೆ.17,18,19ರಂದು ಎಲ್ಲೋ ಅಲರ್ಟ್, ಸೆ.20-21ರಂದು ಬೆಳಗಾವಿ, ಧಾರವಾಡ, ಹಾವೇರಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ ಎಂದರು.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್

ಮಲೆನಾಡು ಜಿಲ್ಲೆಗಳಿಗೆ ಸೆ.19ರಿಂದ 21ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗಬಹುದು. ಇನ್ನು ಕರಾವಳಿ ಪ್ರದೇಶದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಸೆ.18 ರಿಂದ 21ರ ವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ABOUT THE AUTHOR

...view details