ಬೆಂಗಳೂರು: ಆಗಸ್ಟ್ 24 ರವರೆಗೆ ಕರಾವಳಿ ಹಾಗೂ ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆ.24 ರವರೆಗೆ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
ಆಗಸ್ಟ್ 24 ರವರೆಗೆ ದಕ್ಷಿಣ ಒಳನಾಡಿನಲ್ಲಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Rain
ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಆದ್ದರಿಂದ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಆ. 22 ರಂದು ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಆ.23 ಮತ್ತು 24 ರಂದು ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಭಾನುವಾರ (ಇಂದು) ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗಲಿದೆ. ಆ.23 ಮತ್ತು 24 ರಂದು ಮಳೆ ಪ್ರಮಾಣ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.