ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಇಂದು ನಾಳೆ ಹಗುರಾದ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ - Rain in the southern inland and coastal

ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು ಬೆಂಗಳೂರಿನಲ್ಲಿ ಕೆಲವೆಡೆ ಇಂದು ಮತ್ತು ನಾಳೆ ಹಗುರಾದ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

rain
ಮಳೆ

By

Published : Nov 5, 2020, 5:51 PM IST

ಬೆಂಗಳೂರು:ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ನಾಳೆಯಿಂದ ಮೂರು ದಿನ ಕೆಲವೆಡೆ ಮಳೆಯಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು ಬೆಂಗಳೂರಿನಲ್ಲಿ ಕೆಲವೆಡೆ ಇಂದು ಮತ್ತು ನಾಳೆ ಹಗುರಾದ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿಸಿದರು.

ಮಳೆ ಮಾಹಿತಿ ನೀಡಿದ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್

ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಲಿದ್ದು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪಾಟೀಲ್ ತಿಳಿಸಿದ್ದಾರೆ.

ABOUT THE AUTHOR

...view details