ಬೆಂಗಳೂರು:ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಬೆಂಗಳೂರಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ...ಇನ್ನೂ ಮೂರು ದಿನ ಸುರಿಯಲಿದೆ ವರ್ಷಧಾರೆ
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ತುಂತುರು ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ
ರಾಜ್ಯದ ಹಲವೆಡೆ ಇದೇ ವಾತಾವರಣ ಇದ್ದು, ಇನ್ನೂ ಎರಡು - ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತದ ಪ್ರಮಾಣ ಹೆಚ್ಚಾಗಿದ್ದು, ಮುಂದಿನ ಮೂರು ದಿನ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಚಳಿಗಾಳಿ ಜೊತೆಗೆ ಅಲ್ಲಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ತುಮಕೂರು, ಮೈಸೂರು, ಚಿತ್ರದುರ್ಗ, ಕರಾವಳಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.